ವಾಹನ ಸವಾರರೇ, ಇಂದಿನಿಂದ ಈ ನಿಯಮಗಳು ಬದಲಾಗಲಿವೆ
(ವೇಗದ ಮಿತಿ) ಇಂದಿನಿಂದ ರಾಜ್ಯದಲ್ಲಿ ಕೆಲವು ನಿಯಮಗಳಲ್ಲಿ ಬದಲಾವಣೆ ಇದೆ, ಈ ನಿಯಮಗಳನ್ನು ಉಲ್ಲಂಘಿಸಿದರೆ, ದಂಡದ ಜೊತೆಗೆ ಪ್ರಕರಣವನ್ನು ಸಹ ದಾಖಲಿಸಲಾಗುತ್ತದೆ.
ಹೌದು, ವೇಗದ ಸಂಚಾರಕ್ಕೆ ಕಡಿವಾಣ ಹಾಕಲು 130 ಕಿ.ಮೀ. ಮಿತಿ ಮೀರಿದ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತದೆ ಇದು ಇಂದಿನಿಂದ ಆಗಸ್ಟ್ 1 ರಿಂದ ಜಾರಿಗೆ ಬರಲಿದೆ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸುವ ಅಪಘಾತಗಳಲ್ಲಿ ಶೇ.90ರಷ್ಟು ಅಪಘಾತಗಳು ಅತಿವೇಗದ ಚಾಲನೆಯಿಂದ ಆಗುತ್ತಿವೆ ಎಂದು ಸರ್ಕಾರ ವಿವಿಧ ಇಲಾಖೆಗಳ ಮೂಲಕ ನಡೆಸಿದ ಸಮೀಕ್ಷೆಯಿಂದ ತಿಳಿದುಬಂದಿದೆ. ಇದಕ್ಕೆ ಕಡಿವಾಣ ಹಾಕಲು ವಾಹನವನ್ನು ಗಂಟೆಗೆ 130 ಕಿ.ಮೀ.ಗಿಂತ ಹೆಚ್ಚು ವೇಗವಾಗಿ ಓಡಿಸಿದರೆ. ಅಜಾಗರೂಕತೆ ಮತ್ತು ನಿರ್ಲಕ್ಷ್ಯದ ಚಾಲನೆ ಎಂದು ಪರಿಗಣಿಸಿ ಪ್ರಕರಣ ದಾಖಲಿಸಲಾಗುವುದು ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.
ಅಂತಹ ಪ್ರಕರಣಗಳಲ್ಲಿ 2 ಸಾವಿರದವರೆಗೆ ದಂಡ ಹಾಗೂ 6 ತಿಂಗಳ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ಮಾಹಿತಿ ನೀಡಿದರು.
ವಾಹನಗಳಿಗೆ ಪ್ರಖರ ಹೆಡ್ ಲೈಟ್ ಅಳವಡಿಸಿರುವುದರಿಂದ ಎದುರುಗಡೆಯಿಂದ ಸಂಚರಿಸುವ ವಾಹನಗಳಿಗೆ ರಸ್ತೆ ಕಾಣದೆ ಅಪಘಾತ ಸಂಭವಿಸುವ ಸಾಧ್ಯತೆ ಇದೆ. ಹಾಗಾಗಿ ವಾಹನಗಳಿಗೆ ಕಣ್ಣು ಕೋರೈಸುವ ಹೆಡ್ ಲೈಟ್ ಅಳವಡಿಸಬೇಡಿ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಕಣ್ಣಿಗೆ ಕಟ್ಟುವ ಹೆಡ್‌ಲೈಟ್‌ಗಳನ್ನು ಅಳವಡಿಸುವುದರ ವಿರುದ್ಧ ಪೊಲೀಸರು ರಾಜ್ಯಾದ್ಯಂತ 8,000 ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾರೆ. ಕಣ್ಣಿಗೆ ಕಾಣುವ ಎಲ್ ಇಡಿ ದೀಪಗಳನ್ನು ಅಳವಡಿಸಿದ ವಾಹನ ಸವಾರರ ವಿರುದ್ಧ ಪೊಲೀಸರು 8 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾರೆ.